ರಾಯಚೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ನಿಯಮವನ್ನ ಕಡ್ಡಾಯವಾಗಿ ಪಾಲಿಸಬೇಕು. ಆದ್ರೆ, ರಾಯಚೂರು ನಗರದ ಹಿರಿಯ ಉಪನೋಂದಣಿ ಕಚೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ನೋಂದಣಿ ಕಾರ್ಯವನ್ನ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ದಿನ ದಿನಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಜನರು ಗುಂಪು ಗುಂಪಾಗಿ ಸೇರದಂತೆ ಎಚ್ಚರವಹಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಅಷ್ಟಾದರೂ ತಮಗೂ ಕೊರೊನಾಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಜನರು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ.
ಇನ್ನು ಉಪ ನೋಂದಣಿ ಕಚೇರಿಯ ಅಧಿಕಾರಿಗಳೂ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಫಲವಾಗಿದ್ದಾರೆ.