ರಾಯಚೂರು: ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿ ಖಂಡಿಸಿ ಪಿಎಫ್ಐ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಿನ್ನೆ ದೇಶಾದ್ಯಂತ 93 ಸ್ಥಳಗಳಲ್ಲಿ ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿತ್ತು. ಅಲ್ಲದೇ ಅನೇಕ ಪಿಎಫ್ಐ ಕಾರ್ಯಕರ್ತರನ್ನೂ ಬಂಧಿಸಲಾಗಿತ್ತು.
ಇದನ್ನು ಖಂಡಿಸಿ ಜಿಲ್ಲೆಯಲ್ಲಿಂದು ಪಿಎಫ್ಐ ಜಿಲ್ಲಾಧ್ಯಕ್ಷ ಅಸೀಮ್ ನೇತೃತ್ವದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿ ಕೇಂದ್ರ, ರಾಜ್ಯ ಸರ್ಕಾರ ಆರ್ಎಸ್ಎಸ್ ಸೇರಿದಂತೆ ಎನ್ಐಎ ವಿರುದ್ಧ ಘೋಷಣೆ ಕೂಗುತ್ತ ಕೇಂದ್ರ ಸರ್ಕಾರ ಎನ್ಐಎ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: NIA ದಾಳಿ ಖಂಡಿಸಿ ಪ್ರತಿಭಟನೆ: PFI ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಉಡುಪಿ ಪೊಲೀಸರು