ರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮದ ತುಂಗಭದ್ರಾ ನದಿತೀರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳು ತಪಸ್ಸು ಮಾಡಿರುವ ಜಪದ ಕಟ್ಟೆಯ ಸುತ್ತಲೂ ನೀರು ಅವರಿಸಿಕೊಂಡಿದೆ. ವಿಜಯನಗರ(ಹೊಸಪೇಟೆ) ತುಂಗಭದ್ರಾ ಜಲಾಶಯದಿಂದ ನದಿಗೆ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಸಲಾಗಿದೆ. ಇದರಿಂದಾಗಿ ಸಿಂಧನೂರು, ಮಾನವಿ, ರಾಯಚೂರು ತಾಲೂಕಿನ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.
ನದಿಪಾತ್ರದಲ್ಲಿರುವ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗುವ ಆತಂಕ ಎದುರಾಗಿದೆ. ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಜನ-ಜಾನುವಾರು ನದಿಯ ತೀರಕ್ಕೆ ತೆರಳದಂತೆ ಗ್ರಾಮಗಳಲ್ಲಿ ಸಂದೇಶ ಸಾರಲಾಗಿದೆ.
ಜಿಲ್ಲೆಯ ಬಲ ಭಾಗದಲ್ಲಿರುವ ಕೃಷ್ಣಾ ಹಾಗೂ ಎಡಭಾಗದಲ್ಲಿರುವ ತುಂಗಭದ್ರಾ ನದಿಯಲ್ಲಿ ಲಕ್ಷಾಂತರ ಕ್ಯೂಸೆಕ್ ನೀರು ಹರಿಯುತ್ತಿರುವುದ್ದರಿಂದ ಜಿಲ್ಲೆಯಲ್ಲೀಗ ಪ್ರವಾಹದ ಆತಂಕವಿದೆ.
ಇದನ್ನೂ ಓದಿ: ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಸಾವು, ಮೃತರ ಸಂಖ್ಯೆ 41ಕ್ಕೆ ಏರಿಕೆ