ರಾಯಚೂರು: ಹತ್ತಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ದೋತರಬಂಡಿ ಗ್ರಾಮದಲ್ಲಿ ನಡೆದಿದೆ.
ಪುಷ್ಪರಾಜ್ ಎಂಬಾತ ತನ್ನ ಹೊಲದಲ್ಲಿ ಹತ್ತಿಯ ಗಿಡಗಳ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಕವಿತಾಳ ಠಾಣೆ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ಈ ವೇಳೆ ಸುಮಾರು 4.15 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಬೆಳೆಯನ್ನ ವಶಕ್ಕೆ ಪಡೆಯಲಾಗಿದೆ. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.