ETV Bharat / state

ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು - DYS P S .S HULLUR

ಹಣದ ವ್ಯವಹಾರ ಸಂಬಂಧ ನಡೆದಿದ್ದ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಾದ ಮಂಜುನಾಥ್ ಹಾಗೂ ಸೈಯದ್ ಅಲಿ ಎಂಬುವರು ಜಾವೀದ್​​​ ಪಾಷನನ್ನು ಜೂನ್​ 30ರಂದು ಕೊಲೆ ಮಾಡಿದ್ದರು ಎನ್ನಲಾಗಿದೆ.

Police arrested the two accused in the murder
ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
author img

By

Published : Jul 4, 2020, 8:52 PM IST

ಲಿಂಗಸುಗೂರು (ರಾಯಚೂರು): ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರಲ್ಲಿ ಜೂನ್ 30ರಂದು ನಡೆದ ಜಾವೀದ್​​ ಪಾಷ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕಸಬಾಲಿಂಗಸುಗೂರು ಗ್ರಾಮದ ಸೈಯದ್​ ಅಲಿ ಮತ್ತು ಮಂಜುನಾಥ ಎಂಬುವವರು ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ವಾಗ್ವಾದ ನಡೆದು ಖಬರಸ್ಥಾನದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

ಮೃತನ ತಂದೆ ಬಾಬು ಸಾಬ ನೀಡಿದ ದೂರಿನ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್​​ಪಿ ಎಸ್.ಎಸ್.ಹುಲ್ಲೂರು, ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಪ್ರಕಾಶ ರೆಡ್ಡಿ ಡಂಬಳ ನೇತೃತ್ವದ ಪೊಲೀಸ್ ತಂಡ ಆರೋಪಿಗಳ ಬಂಧಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.