ರಾಯಚೂರು: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮರುಳು ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದೇವದುರ್ಗ ತಾಲೂಕಿನ ಗ್ರಾಮವೊಂದರಲ್ಲಿ ೨.೫೫ ಲಕ್ಷ ರೂ. ಮೌಲ್ಯದ ೫೦೦ ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದೆ. ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.