ETV Bharat / state

ಲಾಕ್​ಡೌನ್​ ನಡುವೆ ಅನಾವಶ್ಯಕ ಓಡಾಟ: ಹಲವರನ್ನು ವಶಕ್ಕೆ ಪಡೆದ ಪೊಲೀಸರು - ಜನರನ್ನು ವಶಕ್ಕೆ ಪಡೆದ ಪೊಲೀಸರು

ಮೂರು ದಿನಗಳ ಕಾಲ ಕಠಿಣ ಲಾಕ್​ಡೌನ್​ ಜಾರಿಮಾಡಿದ್ರೂ ಸಹ ರಾಯಚೂರು ನಗರದಲ್ಲಿ ಸುಖಾಸುಮ್ಮನೆ ಓಡಾಡುತ್ತಿದ್ದ ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

police
police
author img

By

Published : May 16, 2021, 3:59 PM IST

ರಾಯಚೂರು: ಕೊರೊನಾ ಸೋಂಕಿನ ನಿಗ್ರಹಕ್ಕೆ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಂಪೂರ್ಣವಾಗಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ಆದರೂ ನಿಯಮ ಮೀರಿ ನಗರದಲ್ಲಿ ಅನವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚುವರಿ ಎಸ್​ಪಿ ಹರಿಬಾಬು ನೇತೃತ್ವದಲ್ಲಿ ನಗರದ ಸ್ಟೇಷನ್ ರಸ್ತೆ, ಮಾರುಕಟ್ಟೆ, ಅಂಬೇಡ್ಕರ್ ಸರ್ಕಲ್ ಸೇರಿದಂತೆ ನಾನಾ ಕಡೆಗಳಲ್ಲಿ ಓಡಾಡುತ್ತಿರುವವರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಎಮೆರ್ಜೆನ್ಸಿ ಕಾರಣ ಇಲ್ಲದೇ ಅನವಶ್ಯಕವಾಗಿ ಓಡಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ನಗರದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.