ರಾಯಚೂರು : ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳನ್ನು ದೇವದುರ್ಗ ಪೊಲೀಸರು ಜಪ್ತಿ ಮಾಡಿದ್ದಾರೆ.
ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಅಕ್ರಮ ಮರಳು ಸಂಗ್ರಹದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಲಕ್ಷ ಮೌಲ್ಯದ 1400 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಿದ್ದಾರೆ.
ಬಸಪ್ಪ ಈರಪ್ಪ ಹೂವಿನಹೆಡಗಿ ಎಂಬುವವರ ಮೇಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣ ನದಿಯಲ್ಲಿ ಪ್ರವಾಹದಿಂದ ಹೇರಳವಾಗಿ ಮರಳು ಸಂಗ್ರಹವಾಗಿದ್ದು, ಅಕ್ರಮ ಮರಳು ದಂಧೆಕೋರರಿಗೆ ವರದಾನವಾಗಿದೆ ಎನ್ನಲಾಗಿದೆ.