ರಾಯಚೂರು: ಲಿಂಗಸುಗೂರು ತಾಲೂಕಿನ ಗೋನವಾಟ್ಲ ತಾಂಡಾದಲ್ಲಿನ ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಡಿವೈಎಸ್ಪಿ ಎಸ್.ಎಸ್. ಹುಲ್ಲೂರು, ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ, ಗೋನವಾಟ್ಲ ತಾಂಡಾದ ಕಿರಾಣಿ ವ್ಯಾಪಾರಿ ರಾಜು ಪೋಮಣ್ಣ ಚವ್ಹಾಣ ಅವರನ್ನು ಬಂಧಿಸಿ 7,55,390 ರೂ. ಹಣ, 11,705 ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ಸಂದರ್ಭದಲ್ಲಿ ಎರಡು ಪ್ರತ್ಯೇಕ ಕಳ್ಳಭಟ್ಟಿ ಮಾರಾಟ ಪ್ರಕರಣ ಭೇದಿಸಿದ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.