ರಾಯಚೂರು: ತುಂಗಭದ್ರಾ ನದಿಯಿಂದ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ಮೌಲ್ಯದ ಮರಳಿನ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ತಾಲೂಕಿನ ರಾಜಲಬಂಡಾ ಗ್ರಾಮದ ಬಳಿ ಜಮೀನೊಂದರಲ್ಲಿ ತುಂಗಭದ್ರಾ ನದಿಯಿಂದ ತೆಗೆದ ಮರಳನ್ನ ಸಂಗ್ರಹಿಸಲಾಗಿತ್ತು.
ಸೂಕ್ತ ಮಾಹಿತಿ ಹಿನ್ನೆಲೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ 1.27 ಲಕ್ಷ ಮೌಲ್ಯದ ಮರಳು, ಜೆಸಿಬಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದರು.