ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನೆಲೆ ಅನೇಕರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನಿಗಳಿಗೆ ಕಳಪೆ ಗುಣಮಟ್ಟದ ಆಹಾರ ವಿತರಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.
ವಲಸೆ ಹೋಗಿ ಜಿಲ್ಲೆಗೆ ಮರಳಿದ ಕಾರ್ಮಿಕರು ಮತ್ತು ಹಲವು ಜನರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಕೇಂದ್ರದಲ್ಲಿರುವವರಿಗೆ ಕಳಪೆ ಆಹಾರ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಕ್ಕೆ ತಂದರೂ ಸಹ ಕ್ಯಾರೆ ಎನ್ನುತ್ತಿಲ್ಲ ಎಂದು ಕ್ವಾರಂಟೈನಿಗಳು ಆರೋಪಿಸುತ್ತಿದ್ದಾರೆ. ಜೊತೆಗೆ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ಈ ಕುರಿತಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.