ರಾಯಚೂರು: ವಿದ್ಯುತ್ ಪರಿವರ್ತಕದ ಗೋಡೆ ಕುಸಿದು ಬೀಳುವ ಹಂತಕ್ಕೆ ತಲುಪ್ಪಿದ್ದು, ಜೆಸ್ಕಾಂ ಅಧಿಕಾರಿಗಳು ಕೂಡಲೇ ದುರಸ್ತಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಗರದ ಪೆಟ್ಲಾಬುರ್ಜ ರಸ್ತೆಯಲ್ಲಿರುವ 10 ಸಾವಿರ ಕೆ.ವಿ.ವಿದ್ಯುತ್ ಪರಿವರ್ತಕದ ಗೋಡೆ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಈ ರಸ್ತೆಯ ಮಾರ್ಗವಾಗಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ.
ಹೀಗಾಗಿ ಯಾವುದೇ ಅನಾಹುತ ಸಂಭವಿಸುವುದಕ್ಕೂ ಮುನ್ನ ಜೆಸ್ಕಾಂ ಅಧಿಕಾರಿಗಳು ಎಚ್ಚತ್ತುಕೊಂಡು ದುರಸ್ತಿಗೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.