ರಾಯಚೂರು: ಜಿಲ್ಲಾ ಗಂಗಾಮತಸ್ಥರ ಸಮಾಜ ಸೇವಾ ಸಂಘದಿಂದ ಇಂದು ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ ಹಾಗೂ ಪದವಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಮಾಜದ ಅಭಿವೃದ್ದಿಯಾಗಬೇಕಾದ್ರೆ ಶಿಕ್ಷಣ ಬಹಳ ಮುಖ್ಯ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಸ್ಥಾನವನ್ನು ಪಡೆಯಲು ಸಹಕರಿಸಬೇಕು ಎಂದು ಕಿವಿಮಾತು ಹೇಳಿದ್ರು.
ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗಳನ್ನು ಸನ್ಮಾನಿಸಿ ಪ್ರಶಸ್ತಿ ಫಲಕ ನೀಡಲಾಯಿತು.