ETV Bharat / state

ಸರ್ಕಾರದ ವಿರುದ್ಧ ಖಾಸಗಿ ಶಿಕ್ಷಕರ ಅಸಮಾಧಾನ: ಶಿಕ್ಷಕ ದಿನಾಚರಣೆಗೆ ಕಪ್ಪು ಪಟ್ಟಿ ಧರಿಸಿ ಭಾಗಿ - ಶಿಕ್ಷಕ ದಿನಾಚರಣೆ

ಸರ್ಕಾರ ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ನಡುವೆ ಭೇದಭಾವ ಮಾಡುತ್ತಿದೆ ಎಂದು ಆರೋಪಿಸಿ, ಸಿಂಧನೂರಿನ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಖಾಸಗಿ ಶಾಲಾ ಸಿಬ್ಬಂದಿ ಹಾಗೂ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

teachers
ಶಿಕ್ಷಕ ದಿನಾಚರಣೆಗೆ ಕಪ್ಪು ಪಟ್ಟಿ ಧರಿಸಿ ಭಾಗಿ
author img

By

Published : Sep 5, 2020, 7:17 PM IST

ರಾಯಚೂರು: ಸರ್ಕಾರವು ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳ ನಡುವೆ ಭೇದಭಾವ ಮಾಡುತ್ತಿದೆ ಎಂದು ಆರೋಪಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಅಸಮಾಧಾನ ಹೊರ ಹಾಕಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಶಿಕ್ಷಕ ದಿನಾಚರಣೆಗೆ ಕಪ್ಪು ಪಟ್ಟಿ ಧರಿಸಿ ಭಾಗಿ

ಸಿಂಧನೂರಿನ ಶ್ರೀಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕ ದಿನಾಚರಣೆ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಖಾಸಗಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮತ್ತು ಅದರಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಬಗ್ಗೆ ಹಾಗೂ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ದ್ವಂದ್ವ ನೀತಿಯನ್ನು ಖಂಡಿಸಿ ಕಪ್ಪುಪಟ್ಟಿ ಧರಿಸುವ ಮುಖಾಂತರ ಅಸಂತೃಪ್ತಿ ವ್ಯಕ್ತಪಡಿಸಿದರು.

ಸರಕಾರ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಠಾರ ಬೋಧನೆ ಅಥವಾ ವಿದ್ಯಾಗಮ ಅಂತ ಪ್ರಾರಂಭ ಮಾಡಿರುವ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳನ್ನು ಅತಂತ್ರ ಸ್ಥಿತಿಗೆ ತಂದಿದೆ ಎಂದು ಆರೋಪಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಕಳೆದ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ತಿಂಗಳಿಗೆ ಕನಿಷ್ಠ 5 ಸಾವಿರ ರೂಪಾಯಿ ಸಹಾಯಧನ ನೀಡುವ ಮುಖಾಂತರ ರಾಜ್ಯ ಸರ್ಕಾರ ಮಾನವೀಯತೆಯನ್ನು ಮೆರೆಯಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.