ETV Bharat / state

ರಾಯಚೂರು: ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಪ್ರತಿಭಟನೆ - ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಪ್ರತಿಭಟನೆ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಸಿಂಧನೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

protest-against-arrest-of-chandrababu-naidu-in-raichur
ರಾಯಚೂರು: ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಪ್ರತಿಭಟನೆ
author img

By ETV Bharat Karnataka Team

Published : Sep 19, 2023, 6:14 PM IST

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಪ್ರತಿಭಟನೆ

ರಾಯಚೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು. ಸಿಂಧನೂರು ಪಟ್ಟಣದ ತಾಲೂಕು ಕ್ರೀಡಾಂಗಣದಿಂದ ಬಸವ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಬಳಿಕ ಪ್ರತಿಭಟನಾಕಾರರು ಬಹಿರಂಗ ಸಭೆ ನಡೆಸಿದರು.

ಪ್ರತಿಭಟನೆಯ ಬಹಿರಂಗಸಭೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, 75 ವರ್ಷಗಳಿಂದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಾವೆಲ್ಲ ಬದುಕುತ್ತಿದ್ದೇವೆ. ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಎಲ್ಲಾ ಭಾರತೀಯರಿಗೆ ಪವಿತ್ರ ಗ್ರಂಥವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯವಸ್ಥೆಯ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದು ಕಳವಳಕಾರಿಯಾಗಿದೆ. ಪ್ರಜಾಪ್ರಭುತ್ವ, ಸಂವಿಧಾನ ಮೀರಿ ಆಂಧ್ರಪ್ರದೇಶದಲ್ಲಿ ದುರ್ನಡತೆಯ ಆಡಳಿತ ನಡೆಯುತ್ತಿರುವುದು ಸರಿಯಾದುದ್ದಲ್ಲ. ರಾಜಕಾರಣದಲ್ಲಿ ಯಾರೂ ಶಾಶ್ವತ ಅಲ್ಲ. ದ್ವೇಷ ಮತ್ತು ದುರ್ನಡತೆಯ ಆಡಳಿತ ರಾಜಕೀಯ ಮುಖಂಡರಿಗೆ ಶೋಭೆ ತರುವುದಿಲ್ಲ. ನಾಯ್ಡು ಬಂಧನ ಖಂಡನೀಯವಾಗಿದೆ. ಇಲ್ಲಿಯವರು ಮಾಡುತ್ತಿರುವ ಹೋರಾಟಕ್ಕೆ ಸದಾ ಬೆಂಬಲ ಇರುತ್ತದೆ ಎಂದರು.

ಮಾಜಿ ಮಂತ್ರಿ ವೆಂಕಟರಾವ್ ನಾಡಗೌಡ ಮಾತನಾಡಿ, ಆಂಧ್ರಪ್ರದೇಶದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಸಾಮಾನ್ಯ ವ್ಯಕ್ತಿಯನ್ನು ಬಂಧಿಸಬೇಕಾದರೆ ಅದರದ್ದೆ ಆದ ನಿರ್ದೇಶನ ಮತ್ತು ನಿಯಮಗಳಿವೆ. ಆದರೆ ಮಾಜಿ ಮುಖ್ಯಮಂತ್ರಿ ಚಂದ್ರುಬಾಬು ನಾಯ್ಡು ಅವರನ್ನು ಅಲ್ಲಿನ ಗರ್ವನರ್ ಆದೇಶವಿಲ್ಲದೆ ಅಲ್ಲಿನ ಸರ್ಕಾರ ಬಂಧಿಸಿರುವುದು ಖಂಡನೀಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕೆ ಹೊರತು. ದ್ವೇಷದಿಂದ ರಾಜಕಾರಣ ಮಾಡಬಾರದು ಎಂದರು.

ಬಿಜೆಪಿ ಮುಖಂಡ ಕೆ.ಕರಿಯಪ್ಪ, ಜಿ.ಪಂ. ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದರು. ಚಂದ್ರುಬಾಬು ನಾಯ್ಡು ಅವರನ್ನು ಬೆಂಬಲಿಸಿ ಸಾವಿರಾರು ಸಂಖ್ಯೆಯಲ್ಲಿ ಆಂಧ್ರ ಸಮಾಜದ ಮುಖಂಡರು, ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮೆರವಣಿಗೆಯುದ್ದಕ್ಕೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಘೋಷಣೆಗಳನ್ನು ಕೂಗಿ, ತಹಶೀಲ್ದಾರ್​ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.

ಬಳ್ಳಾರಿಯಲ್ಲಿ ಪ್ರತಿಭಟನೆ: ಇತ್ತೀಚಿಗೆ, ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆದಿತ್ತು. ನಗರದ ದುರ್ಗಮ್ಮ ದೇವಾಲಯದಿಂದ ಡಿಸಿ ಕಚೇರಿವರೆಗೆ ನಡೆದ ಬೃಹತ್ ಮೆರವಣಿಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡು ಚಂದ್ರಬಾಬು ನಾಯ್ಡುಗೆ ಬೆಂಬಲ ಸೂಚಿಸಿದ್ದರು. ಆಂಧ್ರಪ್ರದೇಶದ ಆಡಳಿತರೂಢ ವೈಎಸ್​ಆರ್​ಪಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು, ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಐಟಿ ಉದ್ಯೋಗಿಗಳಿಂದ ಬೃಹತ್​ ಕಾರು ರ್ಯಾಲಿ.. 9 ಮಂದಿ ಸೆರೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.