ರಾಯಚೂರು: ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರಿಗೆ ಕೊರೊನಾ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ, ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ, ಅತಿಥಿ ಶಿಕ್ಷಕರಿಗೆ ಸರಿಯಾಗಿ ವೇತನ ಪಾವತಿಯಾಗಿಲ್ಲ. ಹೀಗಾಗಿ ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರ ಬಾಕಿ ವೇತನನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿದ್ರು.
ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು ಮತ್ತು ಸೇವಾ ಭದ್ರತೆಯನ್ನ ಒದಗಿಸುವಂತೆ ಒತ್ತಾಯಿಸಿದ್ರು.