ರಾಯಚೂರು: ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನ ಆರಂಭಿಸುವ ಕುರಿತಂತೆ ಸರ್ಕಾರ ದ್ವಂದ್ವ ಹೇಳಿಕೆ ನೀಡುತ್ತಿದೆ. ಇದರಿಂದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆ ಪ್ರವೇಶಾಂತಿ ಪಡೆದ ಮಕ್ಕಳಿಂದ ಶುಲ್ಕ ಪಾವತಿ ವಿಚಾರದಲ್ಲಿ ಗೊಂದಲ ಉಂಟಾಗಿ ಶಾಲಾ ದಾಖಲಾತಿಯನ್ನ ಮಾಡದೆ ಇರುವುರಿಂದ ಶೇ. 50ರಷ್ಟು ಪಾವತಿ ಮಾಡದೆ ಉಳಿಸಿಕೊಳ್ಳಲಾಗಿದೆ. ಇದರಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ. ಹೀಗಾಗಿ ಸರ್ಕಾರ ಕೂಡಲೇ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಪತ್ರ ರವಾನಿಸಿದ್ರು.
ಇದನ್ನೂ ಓದಿ:'ಅರ್ಧ ಕಾಂಗ್ರೆಸ್ ಮುಳುಗಿಸಿದ್ರೇ, ಬಿಜೆಪಿ ಇಡೀ ದೇಶವನ್ನೇ ಮುಳುಗಿಸಿತು.. '