ರಾಯಚೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಹೆಚ್ಚಿಸುವಂತೆ ಆಗ್ರಹಿಸಿ ಸಾವಿರಾರು ಜನರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕಾಗಿತ್ತು. ಆದರೆ, ಆಯೋಗದ ವರದಿಯನ್ನು ಜಾರಿಗೊಳಿಸಿದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಡಿಸಿ ಕಚೇರಿ ಗೇಟಿನ ಬಳಿ ನುಗ್ಗಲು ಯತ್ನಿಸಿದ್ದು, ಕೆಲಕಾಲ ಗೊಂದಲ ವಾತಾವರಣ ಸೃಷ್ಟಿಯಾಗಿತ್ತು. ಈ ವೇಳೆ, ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದರು.
ಪ್ರತಿಭಟನೆಯಲ್ಲಿ ಎಸ್ ಸಿ ಮತ್ತು ಎಸ್ ಟಿ ಸಮುದಾಯಗಳ ಮುಖಂಡರು ಹಾಗೂ ಸ್ವಾಮೀಜಿಗಳು ಹಾಗೂ ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭಾಗವಹಿಸಿದ್ದರು.
ಓದಿ : ಹುಟ್ಟೂರಿಗೆ ಆಗಮಿಸಿದ ಕೆನಡಾ ಸಂಸದ ಚಂದ್ರ ಆರ್ಯ.. ದ್ವಾರಾಳು ಗ್ರಾಮದಲ್ಲಿ ಅದ್ಧೂರಿ ಸ್ವಾಗತ