ETV Bharat / state

ಯುವತಿ ಮೇಲಿನ ಅತ್ಯಾಚಾರ ಕೊಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ - progressive organizations Protest

ಉತ್ತರಪ್ರದೇಶದ ಹಥ್ರಾಸ್​ನಲ್ಲಿ ಯುವತಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಮುಚ್ಚಿ ಹಾಕುತ್ತಿರುವುದನ್ನು ವಿರೋಧಿಸಿ ಲಿಂಗಸುಗೂರಿನಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Protest
ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ
author img

By

Published : Oct 3, 2020, 9:30 PM IST

ಲಿಂಗಸುಗೂರು: ಉತ್ತರಪ್ರದೇಶದ ಹಥ್ರಾಸ್​ನಲ್ಲಿ ಯುವತಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಮುಚ್ಚಿ ಹಾಕುತ್ತಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ (ಕರವೇ, ವಿವಿಧ ದಲಿತ ಸಂಘರ್ಷ ಸಮಿತಿ ಘಟಕಗಳು, ವಿಜಯಸೇನೆ), ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ, ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಮಹಿಳಾ ನೌಕರರ ಒಕ್ಕೂಟ ನೇತೃತ್ವದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗೆ ಬರೆದ ಮನವಿ ಸಲ್ಲಿಸಿದರು.

ಅತ್ಯಾಚಾರ ಕೊಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರದಲ್ಲಿ ರಾಷ್ಟ್ರವ್ಯಾಪಿ ಬಹುತೇಕ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆಯಂತ ಅನೇಕ ಪ್ರಕರಣ ವರದಿಯಾಗುತ್ತ ಬಂದಿವೆ. ಧರ್ಮದ ಹೆಸರಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವುದಕ್ಜೆ ಉತ್ತರ ಪ್ರದೇಶ ಪ್ರಕರಣ ಸಾಕ್ಷಿಯಾಗಿದೆ ಎಂದು ಗಮನ ಸೆಳೆದರು.

ರಾಷ್ಟ್ರವ್ಯಾಪಿ ನಡೆದಿರುವ ಪ್ರಕರಣಗಳ ಅಧ್ಯಯನ ಜೊತೆ ಉತ್ತರ ಪ್ರದೇಶದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಗಲ್ಲು ಶಿಕ್ಷೆಗೆ ದುಷ್ಕರ್ಮಿಗಳನ್ನು ಒಳಪಡಿಸಲು ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಬೇಕು. ಇಲ್ಲದೇ ಹೋದರೆ ರಾಷ್ಟ್ರವ್ಯಾಪಿ ಹೋರಾಟ ಚುರುಕುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.