ರಾಯಚೂರು: ಹಿರಿಯ ವಕೀಲ ಪ್ರಶಾಂತ ಭೂಷಣ ಅವರ ಮೇಲೆ ನ್ಯಾಯಾಂಗ ನಿಂದನೆ ಆರೋಪ ಸಂವಿಧಾನ ವಿರೋಧಿಯಾಗಿದೆ. ಕೂಡಲೇ ಪ್ರಕರಣವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಜನಾಂದೋಲನ ಮಹಾ ಮೈತ್ರಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಪದಾಧಿಕಾರಿಗಳು, ಪ್ರಜಾಪ್ರಭುತ್ವದಲ್ಲಿ ತಪ್ಪನ್ನು ಪ್ರಶ್ನಿಸುವ ಹಕ್ಕು ಸಂವಿಧಾನ ಬದ್ಧವಾಗಿ ನಮಗೆ ಬಂದಿದೆ. ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ತಪ್ಪನ್ನು ಪ್ರಶ್ನೆ ಮಾಡಿದ್ದಾರೆ. ಅವರು ಶಿಕ್ಷೆ ವಿಧಿಸುವ ತಪ್ಪು ಮಾಡಿಲ್ಲ. ಅವರನ್ನು ತಪ್ಪಿತಸ್ಥರು ಎಂದು ನೋಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.