ETV Bharat / state

ಬೆಳೆ ಪರಿಹಾರಕ್ಕೆ ಒತ್ತಾಯಿಸಿ ರಾಯಚೂರಲ್ಲಿ ಪ್ರತಿಭಟನೆ

author img

By

Published : Sep 22, 2020, 5:52 PM IST

ರಾಯಚೂರು ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

Protests by farmers in Raichur
ಬೆಳೆ ಪರಿಹಾರಕ್ಕೆ ಒತ್ತಾಯಿಸಿ ರಾಯಚೂರಿನಲ್ಲಿ ಪ್ರತಿಭಟನೆ

ರಾಯಚೂರು : ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ, ಜಿಲ್ಲಾಧಿಕಾರಿ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರೈತರು ಬೆಳೆದಿರುವ ಬೆಳೆಗಳಾದ ಸಜ್ಜೆ, ಸೂರ್ಯಕಾಂತಿ, ಹತ್ತಿ, ಶೇಂಗಾ, ಹೆಸರು, ತೊಗರಿ ಸೇರಿದಂತೆ ಇತರ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಸಾಲ ಮಾಡಿ ಬೆಳೆದಂತಹ ಬೆಳೆಗಳು ನಾಶವಾಗಿರುವುದರಿಂದ ರೈತರ ಬದುಕು ಅತಂತ್ರವಾಗಿದ್ದು, ಕೂಡಲೇ ಕೃಷಿ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿ ರೈತರಿಗಾದ ನಷ್ಟದ ಪರಿಹಾರ ಒದಗಿಸಿಕೊಡಬೇಕು.

ಕಳೆದ ವರ್ಷ ಕೃಷ್ಣಾ ನದಿಯಿಂದ ಮುಳುಗಡೆಯಾದ ಗ್ರಾಮಗಳ ರೈತರಿಗೆ ಪರಿಹಾರ ನೀಡಬೇಕು. 2017-18 ಸಾಲಿನ ಬೆಳೆ ವಿಮೆ ನೀಡಬೇಕು, ಕೃಷಿ ವಿದ್ಯುತ್ ಪಂಪ್​​ಸೆಟ್​​ಗಳಿಗೆ 12 ಗಂಟೆ ವಿದ್ಯುತ್ ಒದಗಿಸಬೇಕು, ಕೃಷಿ ಇಲಾಖೆಯಲ್ಲಿ ಯಂತ್ರೋಪಕರಣಗಳು ಮತ್ತು ಕೀಟನಾಶಕಗಳು ಸರಿಯಾಗಿ ದೊರಕುತ್ತಿಲ್ಲ, ಸೂಕ್ತ ಕ್ರಮ ಕೈಗೊಳ್ಳಬೇಕು ಸೇರಿದಂತೆ ಇತರ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.