ರಾಯಚೂರು: ರಾಜ್ಯ ಸರ್ಕಾರ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ವಿಳಂಬ ಮಾಡುತ್ತಿವುದನ್ನು ಖಂಡಿಸಿ ರಾಯಚೂರು ವಿಶ್ವವಿದ್ಯಾಲಯ ಹೋರಾಟ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಟೈರ್ಗೆ ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಗುಲ್ಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ರಾಯಚೂರು ಜಿಲ್ಲೆಗೆ ಪ್ರತ್ಯೇಕೆ ವಿವಿ ಸ್ಥಾಪನೆ ಮಾಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬರಲಾಗಿದೆ.
ಇದರ ಫಲವಾಗಿ ಮೈತ್ರಿ ಸರ್ಕಾರದ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಆದ್ರೆ ರಾಯಚೂರು ವಿವಿ ಸ್ಥಾಪನೆಗೆ ಸರ್ಕಾರ ವಿಳಂಬ ನೀತಿ ಅನುಸರಿಸುವ ಮೂಲಕ ವಿವಿ ಸ್ಥಾಪನೆಗೆ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಕೂಡಲೇ ರಾಯಚೂರು ವಿವಿಯ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ರು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ರು.