ETV Bharat / state

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ.. ನಾಲ್ವರು ಆರೋಪಿಗಳ ಬಂಧನ - Sadar Bazar police in Raichur city

5 ಜನ ಆರೋಪಿತರ ವಿರುದ್ಧ ಸದರಬಜಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ..

Raichur: Arrest of four who were on IPL cricket teams
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: ನಾಲ್ವರು ಆರೋಪಿಗಳ ಬಂಧನ
author img

By

Published : Oct 4, 2020, 3:42 PM IST

ರಾಯಚೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿರುವ ಅಡ್ಡೆ ಮೇಲೆ ನಗರದ ಸದರ್ ಬಜಾರ್ ಪೊಲೀಸರು ದಾಳಿ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲಾನಿ ಪಾಷ, ಅನ್ಸಾರ್ ಮಹ್ಮದ್, ಖದೀರ್ ಪಾಷ ಮತ್ತು ಮೊಹ್ಮದ್ ಖಾಲೀದ್ ಪಾಷ ಎಂಬುವರನ್ನು ಬಂಧಿಸಿ, ಅವರಿಂದ ₹ 10,300 ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಗಳು ನಡೆಯುತ್ತಿರುವ ಹಿನ್ನೆಲೆ ಪೂರ್ವ ವೃತ್ತ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರಿಬಾಬು, ಡಿವೈಎಸ್‌ಪಿ ಶಿವನಗೌಡ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಸಿಪಿಐ ಪೂರ್ವ ವೃತ್ತ ಎಂ ಡಿ ಫಸಿಯುದ್ದೀನ್, ಪಿಎಸ್‌ಐ ಮಂಜುನಾಥ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

5 ಜನ ಆರೋಪಿತರ ವಿರುದ್ಧ ಸದರಬಜಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.