ರಾಯಚೂರು: ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ನಲ್ಲಿ ಬೆಳಗ್ಗೆ ಹಂತ ಹಂತವಾಗಿ ನೀರಿನ ಹರಿವು ಇಳಿಮುಖವಾಗುತ್ತಿದೆ. ಇದರಿಂದ ಕೃಷ್ಣಾ ನದಿ ಪ್ರವಾಹ ಕೊಂಚ ಕಡಿಮೆಯಾಗಿದೆ.
ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಣಾ ನದಿಗೆ ಭೀಮಾ ನದಿ ಸಂಗಮವಾಗಲಿದೆ. ನಿನ್ನೆಯಿಂದ ಭೀಮಾ ನದಿಯ ನೀರಿನ ಪ್ರಮಾಣ ಕ್ರಮೇಣವಾಗಿ ಕಡಿಮೆಯಾಗುತ್ತಿದ್ದು, ಪ್ರವಾಹ ಭೀತಿ ಕಡಿಮೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ 2 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರಿಂದ ರಾಯಚೂರು ತಾಲೂಕಿನ 17 ಗ್ರಾಮಗಳಿಗೆ ಎದುರಾಗಿದ್ದ ಪ್ರವಾಹ ಭೀತಿ ಕಡಿಮೆಯಾಗಿದೆ.
ಪ್ರವಾಹ ಭೀತಿ ಕ್ರಮೇಣ ಕಡಿಮೆಯಾಗುತ್ತಿದ್ದರೆ, ಮತ್ತೊಂದೆಡೆ ಜಿಟಿ ಜಿಟಿ ಮಳೆ ಸುರಿಯುತ್ತಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.