ರಾಯಚೂರು: ಕರ್ತವ್ಯದಿಂದ ವಜಾಗೊಂಡ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ವಿನೋದ್ ಕುಮಾರ್ (42) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಎಂಟಿಸಿಯಲ್ಲಿ ಚಾಲಕ ಹಾಗೂ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ವಿನೋದ್ ಕುಮಾರ್ ಮುಷ್ಕರದಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆ ಕರ್ತವ್ಯದಿಂದ ವಜಾಗೊಳಿಸಲಾಗಿತ್ತು. ಕೆಲಸವಿಲ್ಲದೇ ತಮ್ಮ ಸ್ವಗ್ರಾಮಕ್ಕೆ ಮರಳಿ ಅಲ್ಲೂ ಕೆಲಸವಿಲ್ಲದೆ ಅತಂತ್ರ ಸ್ಥಿತಿಗೆ ಸಿಲುಕಿದ್ದರು. ಮಾನಸಿಕವಾಗಿ ಕುಗ್ಗಿ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಾದಪ್ಪನ ಬೆಟ್ಟದ ವಸತಿಗೃಹದಲ್ಲಿ ಚಿನ್ನದ ಸರ ಬೀಳಿಸಿಕೊಂಡಿದ್ದ ಟೆಕ್ಕಿ ಪತ್ನಿ: ಪ್ರಾಮಾಣಿಕತೆ ಮೆರೆದ ನೌಕರ