ರಾಯಚೂರು: ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಂಡಸಾಗರ ಗ್ರಾಮದ ಬಳಿ ಈ ದುರ್ಘಟನೆ ಜರುಗಿದೆ. ಚಂದಾಲಿಂಗ, ರವಿ ಮೃತರು.
ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಇನ್ನೋರ್ವ ವ್ಯಕ್ತಿ ಮಾರ್ಗ ಮಧ್ಯೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.