ETV Bharat / state

ಜಲಧಾರೆ ಯೋಜನೆ ಮೂಲಕ 1406 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ: ರಾಯಚೂರು ಸಿಇಒ - 1406 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ

ಯೋಜನೆ ಅಡಿ ಆಯ್ಕೆಯಾದ 1406 ಗ್ರಾಮಗಳ ಜನವಸತಿ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬರಿಗೆ ಪ್ರತಿ ದಿನ 55 ಲೀಟರ್‌ನಂತೆ ವರ್ಷಕ್ಕೆ 21 ಲಕ್ಷ 39 ಸಾವಿರ ಜನರಿಗೆ ನೀರು ಸರಬರಾಜು ಮಾಡಬಹುದಾಗಿದೆ..

raichur-ceo-laksmikhanth-talk-about-jaladhare-project
ಜಲಧಾರೆ ಯೋಜನೆ ಮೂಲಕ 1406 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ: ರಾಯಚೂರು ಸಿಇಓ
author img

By

Published : Sep 25, 2020, 7:23 PM IST

ರಾಯಚೂರು : ಜಿಲ್ಲೆಯಲ್ಲಿ ಜಲಧಾರೆ ಕುಡಿಯುವ ನೀರಿನ ಯೋಜನೆ ಮೂಲಕ 1406 ಗ್ರಾಮಗಳ ಜನವಸತಿ ಪ್ರದೇಶಗಳಿಗೆ ನೀರು ತಲುಪಿಸುವ ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಹೇಳಿದರು.

ಜಲಧಾರೆ ಯೋಜನೆ ಮೂಲಕ 1406 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ

ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಲಾಧಾರೆ ಯೋಜನೆಯ ಸಮಾಲೋಚಕರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಜಲಧಾರೆ ಯೋಜನೆಯು 159.50 ಎಂಎಲ್‌ಡಿ ( 2.06) ಟಿಎಂಸಿ ನೀರನ್ನು ನಾರಾಯಣಪುರ ಜಲಾಶಯದಿಂದ ಪಡೆದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನ ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದೆ.

ಯೋಜನೆ ಅಡಿ ಆಯ್ಕೆಯಾದ 1406 ಗ್ರಾಮಗಳ ಜನವಸತಿ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬರಿಗೆ ಪ್ರತಿ ದಿನ 55 ಲೀಟರ್‌ನಂತೆ ವರ್ಷಕ್ಕೆ 21 ಲಕ್ಷ 39 ಸಾವಿರ ಜನರಿಗೆ ನೀರು ಸರಬರಾಜು ಮಾಡಬಹುದಾಗಿದೆ ಎಂದರು.

ಈ ಸಂವಾದದಲ್ಲಿ ಜಲಧಾರೆ ಯೋಜನೆಯ ಸಮಾಲೋಚಕರಿಗೆ ಕೆಲ ಅಂಶಗಳನ್ನು ಮರು ಪರಿಶೀಲಿಸುವಂತೆ ಸೂಚಿಸಿ ನಂತರ ಸರ್ಕಾರದ ಅನುಮೋದನೆ ಪಡೆಯಲು ಹೇಳಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅಧಿಕಾರಿ ಗಣಪತಿ ಸಾಕ್ರೆ ಸೇರಿ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.