ETV Bharat / state

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿ ಖಂಡಿಸಿ ರಾಯಚೂರು ಜಿಲ್ಲೆಯ ಜೀವನಾಡಿ ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಮುಖಾಂತರ ರೈತರ ಬೆಳೆಗಳಿಗೆ ಬೇಸಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ
author img

By

Published : Nov 13, 2019, 4:55 PM IST

ರಾಯಚೂರು: ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿ ಖಂಡಿಸಿ, ಜಿಲ್ಲೆಯ ಜೀವನಾಡಿ ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಮುಖಾಂತರ ರೈತರ ಬೆಳೆಗಳಿಗೆ ಬೇಸಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್​ನಿಂದ ಪ್ರತಿಭಟನೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಂಜ್ ರಸ್ತೆ, ಚಂದ್ರಮೌಳೇಶ್ವರ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಿನೇಶ್ ಗುಂಡೂರಾವ್​, ಈಶ್ವರ್ ಖಂಡ್ರೆ ತೆರೆದ ವಾಹನದಲ್ಲಿ ಪ್ರತಿಭಟನೆ ನಡೆಸಿದ್ದು, ಇತ್ತ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿಯವರ ಅಣಕು‌ ಶವಯಾತ್ರೆ ಮಾಡಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಆರ್ಥಿಕ ಪರಿಸ್ಥಿತಿ ದಿವಾಳಿ ಎದ್ದಿದೆ. ಆರ್ಥಿಕ ತೀರ್ಮಾನ ಕೈಗೊಳ್ಳುವಲ್ಲಿ ವಿಫಲವಾಗಿ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ದೂರಿದರು. 2014ರಂದು ಆಡಳಿತಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿದೇಶದಲ್ಲಿನ‌ ಕಪ್ಪು‌ಹಣ ವಾಪಸ್ ತಂದು ಪ್ರತಿಯೊಬ್ಬರ ಅಕೌಂಟ್​ಗೆ ರೂ.15 ಲಕ್ಷ ಹಾಕುತ್ತೇವೆಂದು ಮೋಸ ಮಾಡಿದೆ. 2 ಕೋಟಿ ಉದ್ಯೋಗ ಸೃಷ್ಟಿಯೂ ಮಾಡಿಲ್ಲ ಎಂದು ದೂರಿದರು.

Intro:ಕೇಂದ್ರ ಸರಕಾರದ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿ ಖಂಡಿಸಿ ಖಂಡಿಸಿ, ಜಿಲ್ಲೆಯ ಜೀವನಾಡಿ ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಮುಖಾಂತರ ರೈತರ ಬೆಳೆಗಳಿಗೆ ಬೇಸಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ (ಐಸಿಸಿ)ಸಭೆ ಕರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Body:ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಂಜ್ ರಸ್ತೆ,ಚಂದ್ರಮೌಳೇಶ್ವರ ರಸ್ತೆ, ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಧರಣಿ ನಡೆಸಿದರು,ದಿನೇಶ್ ,ಈಶ್ವರ್ ಖಂಡ್ರೆ ಅವರು ತೆರೆದ ವಾಹನದಲ್ಲಿ ನಡೆದು ಪ್ರತಿಭಟನೆ ನಡೆಸಿದರು ಇತ್ತ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿಯವರ ಅಣಕು‌ ಶವಯಾತ್ರೆ ಮಾಡಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಆಡಳಿತಕ್ಕೆ ಬಂದಾಗಿನಿಂದ ಆರ್ಥಿಕ ಪರಿಸ್ಥಿತಿ ದಿವಾಳಿ ಎದ್ದಿದೆ ಆರ್ಥಿಕ ತೀರ್ಮಾನ ಕೈಗೊಳ್ಳುವಲ್ಲಿ ವಿಫಲವಾಗಿ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ದೂರಿದರು. 2014ರಂದು ಆಡಳಿತ ಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ವಿದೇಶಿಯಲ್ಲಿನ‌ ಕಪ್ಪು‌ಹಣ ವಾಪಸ್ ತಂದು ಪ್ರತಿಯೊಬ್ಬರ ಅಕೌಂಟ್ಗೆ ರೂ.15 ಲಕ್ಷ ಹಾಕುತ್ತೇವೆಂದು ಮೋಸ ಮಾಡಿದ್ದಾರೆ.2 ಕೋಟಿ ಉದ್ಯೋಗ ಸೃಷ್ಟಿಯೂ ಮಾಡಿಲ್ಲ ಎಂದು ದೂರಿದರು. 2019 ರಂದು ಆಡಳಿತಕ್ಕೆ ಎರಡನೇ ಬಾರಿಗೆ ಬಂದರೂ ಜಾತಿ, ಧರ್ಮ,ಮಂದಿರ ಮಸೀದಿಯಂತಹ‌ ವಿಷವನ್ನಿಟ್ಟುಕೊಂಡು ಭಾವನಾತ್ಮಕ ವಿಷಯಗಳ ಮೇಲೆ ರಾಜಕೀಯ ಮಾಡುತ್ತಿದೆ ಎಂದು ದೂರಿದರು. ನರೇಂದ್ರ ಮೋದಿ ಅಮಿತ್ ಷಾ ನಿರುದ್ಯೋಗ, ಬಡತನ,ಸಾಮರಸ್ಯ,ಕೃಷಿ,ಶಿಕ್ಷಣ,ಅರೋಗ್ಯ, ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ದ ಬಗ್ಗೆ ಗಮನಹರಿಸದೇ 370 ರದ್ದತಿ, ವೀರ ಸಾವರ್ಕರ್, ವಿದೇಶಿ ಪೌರತ್ವ ಇತ್ಯಾದಿ ವಿಷಯಗಳನ್ನಿಟ್ಟುಕೊಂಡು ಕಾಲಹರಣ ಮಾಡುತ್ತಾ ದೇಶದ ಆರ್ಥಿಕ ಪರಿಸ್ಥಿತಿ ದುಸ್ತಿಗೆ ತಳ್ಳಿದೆ. ಕೇಂದ್ರದ ಅವೈಜ್ಞಾನಿಕ ನೀತಿಯಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ 72 ರ ಗಡಿ ದಾಟಿದೆ,ಆಟಾಒಮೋಬೈಲ್ ಕ್ಷೇತ್ರ,ಬೈಸಿಕಲ್ ಕೈಗಾರಿಕೆ,ಸಣ್ಣ ಕೈಗಾರಿಕೆ ಕೋಟ್ಯಾಂತರ ಉದ್ಯೋಗ ನಾಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Conclusion:ಬೈಟ್: ಬಿ.ವಿ.ನಾಯಕ.ಮಾಜಿ ಸಂಸದ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.