ರಾಯಚೂರು: ಜಿಲ್ಲೆಯಲ್ಲಿ ಇಂದು 126 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 12220 ಕ್ಕೆ ತಲುಪಿದೆ. ರಾಯಚೂರು ತಾಲೂಕಿನಲ್ಲಿ 57, ಮಾನವಿ 23, ಲಿಂಗಸೂಗೂರು 16, ಸಿಂಧನೂರು 18, ದೇವದುರ್ಗದಲ್ಲಿ 12 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 10745 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 1336 ಪ್ರಕರಣಗಳು ಸಕ್ರಿಯವಾಗಿವೆ.
ಇಂದಿನವರೆಗೆ ಸೋಂಕಿನಿಂದ 139 ಜನರ ಮೃತಪಟ್ಟಿದ್ದಾರೆ. ರಿಮ್ಸ್, ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ 356 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿ 75 ಜನರನ್ನು ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಎನ್ಎಂಸಿಹೆಚ್, ಖಾಸಗಿ ಕೋವಿಡ್ ಆಸ್ಪತ್ರೆ, ಹೋಟೇಲ್ ಕ್ವಾರೆಂಟೈನ್ನಲ್ಲಿ 151 ಜನ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಕ್ವಾರಂಟೈನ್ನಲ್ಲಿ 753 ಜನ ಇದ್ದಾರೆ. ಇಂದು ಪತ್ತೆಯಾಗಿರುವ ಸೋಂಕಿತರ ಸಂಪರ್ಕಗಳನ್ನ ಸಂಗ್ರಹಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.