ETV Bharat / state

ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಹತ್ಯೆ ಮಾಡಿದ ಯುವಕ - ರಾಮರೆಡ್ಡಿ ಕ್ಯಾಂಪ್

Raichur Crime: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಮಂಗಳವಾರ ರಾತ್ರಿ ನಡೆದಿದೆ.

Raichur Crime
ರಾಯಚೂರು: ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಹತ್ಯೆ ಮಾಡಿದ ಯುವಕ
author img

By

Published : Aug 16, 2023, 1:30 PM IST

ರಾಯಚೂರು: ಕುಡಿದ ಅಮಲಿನಲ್ಲಿ ಯುವಕ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ಜರುಗಿದೆ. ರವಿಕುಮಾರ (33) ಕೊಲೆಯಾದ ಯುವಕ. ಕೊಲೆ ಮಾಡಿರುವ ಆರೋಪಿ ಹುಬ್ಬಳ್ಳಿ ಮೂಲದ ಪವನ ಕುಮಾರ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಮೃತನ ಮನೆಯ ಮಾಳಿಗೆಯ ಮೇಲೆ ಇಬ್ಬರು ಸ್ನೇಹಿತರು ಮದ್ಯಪಾನ ಮಾಡುತ್ತಿದ್ದರು. ಕುಡಿದ ಮತ್ತಲ್ಲಿ ಇಬ್ಬರು ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ವೇಳೆ, ಹುಬ್ಬಳ್ಳಿ ಮೂಲದ ಪವನ ಕುಮಾರ ತನ್ನ ಸ್ನೇಹಿತ ರವಿಕುಮಾರನನ್ನು ಕೊಲೆ ಮಾಡಿದ್ದಾನೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ಯುವಕ ಸಾವು: ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರಾಮರೆಡ್ಡಿ ಕ್ಯಾಂಪ್​ನಲ್ಲಿ ಸಂಭವಿಸಿದೆ. ರಾಮರೆಡ್ಡಿ ಕ್ಯಾಂಪಿನ ನಿವಾಸಿ ಭೀಮಶಂಕರ (20) ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ರಾಮರೆಡ್ಡಿ ಕ್ಯಾಂಪ್‌ನ ವ್ಯಾಪ್ತಿಯಲ್ಲಿ‌ ಗ್ರಾಮ ಪಂಚಾಯ್ತಿ ವತಿಯಿಂದ ಕೆಲಸ ಮಾಡುತ್ತಿದ್ದ, ವಿದ್ಯುತ್ ಕಂಬಕ್ಕೆ ಬಲ್ಪು ಹಾಕಲು ಹೋದಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಮಗನನ್ನು ಕಳೆದಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ತಾಯಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಹಿಳೆಯ ಶವ ಪತ್ತೆ- ಕೊಲೆ ಶಂಕೆ: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಇತ್ತೀಚೆಗೆ ಮಹಿಳೆಯ ಶವ ಪತ್ತೆಯಾಗಿತ್ತು. ಜವಳಗೇರಾ ಗ್ರಾಮದ ಸಮೀಪ ಜಾನೇಕಲ್ ಎನ್ನುವವರ ಹೊಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿತ್ತು. ತಡರಾತ್ರಿ ವೇಳೆ ಈ‌ ಮೃತದೇಹವನ್ನು ಎಸೆದು ಹೋಗಿದ್ದರು. ಇತ್ತೀಚೆಗೆ ಘಟನೆ ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಳಗಾನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದರು. ಬೆರಳಚ್ಚು ತಜ್ಞರು, ಶ್ವಾನ ದಳದಿಂದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದ್ದರು.

ಮಹಿಳೆಯ ಮುಖ ಹಾಗೂ ಗುರುತು ಪತ್ತೆಯಾಗದಂತೆ ಯಾವ ಕೆಮಿಕಲ್ ಬಳಸಿರಬಹುದು, ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿತ್ತು. ಆದರೆ ಮಹಿಳೆಯ ಗುರುತು ಪತ್ತೆಯಾಗಿರಲಿಲ್ಲ‌. ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟಿದ್ದರು. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸರು ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ: ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ಅಪರಿಚಿತ ಜೋಡಿ ಶವ ಪತ್ತೆ: ಬೆಚ್ಚಿ ಬಿದ್ದ ಜನತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.