ETV Bharat / state

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ರಾಯಚೂರು ಜಿಲ್ಲೆಯಲ್ಲಿ ಸಚಿವ ಆರ್. ಅಶೋಕ್ ಗ್ರಾಮವಾಸ್ತವ್ಯ - ಕುಂದು ಕೊರತೆಗಳ ಪರಿಶೀಲನೆ

ಈ ಬಾರಿ ರಾಯಚೂರು ಜಿಲ್ಲೆಯ ಅರಕೇರಾದಲ್ಲಿ ಅ.15 ಮತ್ತು 16 ರಂದು ( ಶನಿವಾರ ಮತ್ತು ಭಾನುವಾರ) ಸಚಿವ ಆರ್​ ಅಶೋಕ್ ಸ್ವತಃ ಭಾಗವಹಿಸಲಿದ್ದಾರೆ. ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಸಚಿವರು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ರಾಯಚೂರು ಜಿಲ್ಲೆಯಲ್ಲಿ ಸಚಿವ ಆರ್. ಅಶೋಕ್ ಗ್ರಾಮವಾಸ್ತವ್ಯ
Raichur DC jilladhikari nade halli kade from tomorrow: Minister R Ashok Village Stay
author img

By

Published : Oct 14, 2022, 5:58 PM IST

ಬೆಂಗಳೂರು: ಜನರ ಬಳಿಗೆ ಸರ್ಕಾರವೇ ಬಂದು ಸಮಸ್ಯೆ ಆಲಿಸಬೇಕು ಎನ್ನುವುದು "ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ" ಕಾರ್ಯಕ್ರಮದ ಮುಖ್ಯ ಉದ್ದೇಶ. ಕಂದಾಯ ಸಚಿವ ಆರ್. ಅಶೋಕ್ ಅವರೇ ಇದರ ನೇತೃತ್ವ‌ವಹಿಸಿ ಈ ಕಾರ್ಯಕ್ರಮವನ್ನು ಮುನ್ನೆಡೆಸುತ್ತಿದ್ದಾರೆ. ಜನರಿಗೆ ಉನ್ನತ ಅಧಿಕಾರಿಗಳು ಸುಲಭವಾಗಿ ಸಿಗುವಂತಾಗಬೇಕು. ಸಮಸ್ಯೆಯನ್ನು ಬಗೆಹರಿಸಲು ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಇದನ್ನು ಆರಂಭಿಸಲಾಗಿದೆ.

ಈ ಬಾರಿ ರಾಯಚೂರು ಜಿಲ್ಲೆಯ ಅರಕೇರಾದಲ್ಲಿ ಅ.15 ಮತ್ತು 16 ರಂದು ( ಶನಿವಾರ ಮತ್ತು ಭಾನುವಾರ) ಸಚಿವ ಆರ್​ ಅಶೋಕ್ ಸ್ವತಃ ಭಾಗವಹಿಸಲಿದ್ದಾರೆ. ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಸಚಿವರು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಇದು ಕಂದಾಯ ಸಚಿವ ಆರ್. ಅಶೋಕ್ ಅವರ ಯಶಸ್ವಿ 10 ನೇ ಜಿಲ್ಲೆಯ ಗ್ರಾಮ ವಾಸ್ತವ್ಯ. ರಾಜ್ಯಾದ್ಯಂತ ಈವರೆಗೆ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ 1,26,384 ಫಲಾನುಭವಿಗಳಿಗೆ ಹಾಗೂ ಇತರ ಇಲಾಖೆಯಿಂದ 1,68,987 ಫಲಾನುಭವಿಗಳಿಗೆ ಸೇರಿ ಒಟ್ಟು 2,95,371 ಜನರಿಗೆ ಸೌಲಭ್ಯ ವಿತರಿಸಲಾಗಿದೆ.

ಈ ಸಂದರ್ಭದಲ್ಲಿ ಸಚಿವರು ಜನಸ್ಪಂದನ, ಕುಂದು ಕೊರತೆಗಳ ಪರಿಶೀಲನೆ ಹಾಗೂ ಸ್ಥಳೀಯರ ಜೊತೆ ಕುಂದು ಕೊರತೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಪೌತಿ ಖಾತೆ ಅಭಿಯಾನ ಸಹ ನಡೆಯಲಿದೆ.

ಶನಿವಾರ ಬೆಳಗ್ಗೆ 11 ಗಂಟೆಗೆ ಅರಕೇರಾ ಗಾಂಧಿ ಮೈದಾನದಲ್ಲಿ ವಿವಿಧ ಮಳಿಗೆ ಉದ್ಘಾಟನೆ ಮಾಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಯಿಂದ ಸಾವಿರಾರು ಜನರಿಗೆ ವಿವಿಧ ಸೌಲಭ್ಯಗಳ ವಿತರಣೆಯನ್ನು ಸಚಿವರು ಮಾಡಲಿದ್ದಾರೆ. ವಿಶೇಷವಾಗಿ ಗ್ರಾಮಸ್ಥರೊಡನೆ ಕುಂದು ಕೊರತೆಗಳ ಕುರಿತು ಸಂವಾದ ನಡೆಸಲಿದ್ದಾರೆ. ಅ.15ರ ಸಂಜೆ 7 ಗಂಟೆಗೆ ವಿಧ್ಯಾರ್ಥಿಗಳು ಮತ್ತು ಸ್ಥಳೀಯ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ರಾತ್ರಿ ಅರಕೇರಾ ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ಸಚಿವರು ವಾಸ್ತವ್ಯ ಮಾಡಲಿದ್ದಾರೆ. ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಸಹ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ. 24 ಗಂಟೆಗಳ ಕಾಲ ಹಳ್ಳಿಯಲ್ಲಿಯೇ ಇದ್ದು ಎಲ್ಲ ಅರ್ಜಿಗಳನ್ನು ಕಡ್ಡಾಯವಾಗಿ ಅಲ್ಲಿಯೇ ವಿಲೇವಾರಿ ಮಾಡುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ವಿಶೇಷತೆ. ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರೂ ಆದ ಶಿವನಗೌಡ ನಾಯಕ ಮತ್ತು ಶಾಸಕರು, ಸಂಸದರು, ಮುಖಂಡರು ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ರಾಯಚೂರು: ಅನುಮಾನಾಸ್ಪದ ರೀತಿ ಗ್ರಾಮ ಪಂಚಾಯತ್​ ಪಿಡಿಒ ಶವ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.