ರಾಯಚೂರು : ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಐದು ವರ್ಷದ ಮಗು ಶಂಕಿತ ಡೆಂಘೀ ಜ್ವರದಿಂದ ಬಳಲಿ ಸಾವನ್ನಪ್ಪಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ನಿವಾಸಿ ಮಂಜುನಾಥ ಎನ್ನುವರ ಪುತ್ರ ಸಿದ್ದಾರ್ಥ (5) ಡೆಂಘೀ ಜ್ವರದಿಂದ ಬಳಲಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.
ಬಾಲಕನಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ರಾಯಚೂರು ನಗರದ ಖಾಸಗಿ ಆಸ್ಪತ್ರೆಯ ಮೂರು ದಿನಗಳ ಕಾಲ ಬಾಲಕನಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ.
ಘಟನೆ ವಿಚಾರ ತಿಳಿದು ಬಾಲಕನ ಮನೆಗೆ ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿದ್ದು, ಡೆಂಘೀ ಕುರಿತು ಖಚಿತ ಪಡಿಸಿಲ್ಲ. ಇತ್ತ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರನಲ್ಲಿ ಕೈ ತೊಳೆಯುತ್ತಿದ್ದಾರೆ.
ಇನ್ನೂ ಜಿಲ್ಲೆಯ ಡೆಂಘೀ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದ್ದು, ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಕಾರಣ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಡೆಂಘೀ ಜ್ವರ ನಿಯಂತ್ರಣಕ್ಕೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ತಲೆಗೆ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ: ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಶಂಕೆ?