ರಾಯಚೂರು : ಕೋವಿಡ್ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿ ಆರಂಭಿಸಲಾದ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಕುರಿತು ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಆರ್ ವೆಂಕಟೇಶ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಅಮರೇಶ್ವರ ಆಸ್ಪತ್ರೆ, ಲಕ್ಷ್ಮಿನಾರಾಯಣ ಆಸ್ಪತ್ರೆ ಹಾಗೂ ನ್ಯೂ ಫಾರಚೂನ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಆರೋಗ್ಯಕ್ಕಾಗಿ ಕೈಗೊಳ್ಳಲಾಗಿರುವ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದರು.
ಮೊದಲಿಗೆ ನಗರದ ಚಂದ್ರಮೌಳೆಶ್ವರ ವೃತ್ತದಲ್ಲಿರುವ ಅಮರೇಶ್ವರ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿನ ಸೌಲಭ್ಯ ಪರಿಶೀಲಿಸಿ, ಕೈಗೊಳ್ಳಬೇಕಾದ ಸೌಲಭ್ಯಗಳ ಕುರಿತು ಸೂಚನೆ ನೀಡಿದರು. ಕೋವಿಡ್ ರೋಗಿಗಳ ಅವಶ್ಯಕತೆಗಳು, ಖಾಸಗಿ ಆಸ್ಪತ್ರೆಯಲ್ಲಿನ ಸೌಲಭ್ಯ, ಚಿಕಿತ್ಸೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಳ್ಳಲು ಕೇಂದ್ರದ ಮಾರ್ಗಸೂಚಿ ಅನ್ವಯ ಮಾಡಿಕೊಳ್ಳಬೇಕಾದ ಬಗ್ಗೆ ಆಸ್ಪತ್ರೆಯ ವೈದ್ಯರಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ಸೇರಿ ಇತರೆ ಹಿರಿಯ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.