ರಾಯಚೂರು: 15 ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ತರಬೇತಿ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.
ಕೆಎಸ್ಐಎಸ್ಎಫ್ (ಕರ್ನಾಟಕ ಇಂಡಸ್ಟ್ರೀಯಲ್ ಸೆಕ್ಯೂರಿಟಿ ಫೋರ್ಸ್) ನಲ್ಲಿ ತರಬೇತಿ ಪಡೆಯುತ್ತಿರುವ 100 ಪ್ರಶಿಕ್ಷಣಾರ್ಥಿಗಳ ಪೈಕಿ 15 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಕಳೆದ ಮೂರು ದಿನಗಳ ಹಿಂದೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, 15 ಜನರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದ್ದು, ಇವರೊಂದಿಗೆ ಸಂಪರ್ಕದಲ್ಲಿದ್ದ 36 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ಪೊಲೀಸ್ ತರಬೇತಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ರೋಗದ ಗುಣಲಕ್ಷಣಗಳು ಇಲ್ಲದವರನ್ನು ಮಾತ್ರ ಕೆಲಕಾಲ ಮೈದಾನಕ್ಕೆ ಬಿಡಲಾಗುತ್ತಿದೆ.
ಈಗಾಗಲೇ ತರಬೇತಿ ಕೇಂದ್ರವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದ್ದು, ಸೀಲ್ ಡೌನ್ ಮಾಡಲಾಗಿದೆ.