ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಸಂಸದ ರಂಗಪ್ಪ ನಾಯಕ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ನಿನ್ನೆ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ವಾಹನಗಳಿಗೆ ಮೇಲೆ ಪರವಾನಗಿ ಇಲ್ಲದೆ ಭಾವಚಿತ್ರ ಆಂಟಿಸಿರುವ ದೂರಿನ ಹಿನ್ನೆಲೆ ಫ್ಲೈಯಿಂಗ್ ಸ್ಕ್ವಾಡ್ನಿಂದ ಎರಡು ವಾಹನ ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.