ರಾಯಚೂರು: ಸಿಡಿಲು ಬಡಿದ ಪರಿಣಾಮ ತೆಂಗಿನಮರ ಹೊತ್ತಿ ಉರಿದ ಘಟನೆ ನಡೆದಿದೆ.
ಜಿಲ್ಲೆಯ ಸಿರವಾರ ಪಟ್ಟಣದ ವೀರಮದಕರಿ ಕಾಲೋನಿಯಲ್ಲಿ ನಿನ್ನೆ ಸಂಜೆ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿದ್ದು, ಸ್ಥಳೀಯರಲ್ಲಿ ಕೆಲಕಾಲ ಆತಂಕ ಉಂಟುಮಾಡಿತ್ತು.
ಬಳಿಕ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದು, ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.