ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ ಸಂಗಪ್ಪ ಮೇಟಿಯನ್ನು ಕಿಡ್ನಾಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15 ತಿಂಗಳ ಕಾಲ ರೋಡಲಬಂಡಾ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿ, ಮೊನ್ನೆಯಷ್ಟೇ ಒತ್ತಾಯಪೂರ್ವಕವಾಗಿ ರಾಜೀನಾಮೆ ನೀಡಿದ್ದ ಮೇಟಿಯನ್ನ ಇದೇ 21ರ ರಾತ್ರಿ ಬೀಳಗಿಯ ಲಾಡ್ಜ್ನಲ್ಲಿ ಬಲವಂತವಾಗಿ ಹತ್ತಾರು ಜನರು ಎಳೆದುಕೊಂಡು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ನನಗೆ ತಿನ್ನಲು ಬಿಸ್ಕತ್ತು, ಚಾಕೊಲೇಟ್, ನೀರು ಕೊಟ್ಟರು.. ಕಿಡ್ನ್ಯಾಪ್ ಬಗ್ಗೆ ಮಾಹಿತಿ ಬಿಚ್ಚಿಟ್ಟ ಬಾಲಕ!