ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಮ್ಮಾರಿಯಂತೆ ಕಾಡುತ್ತಿದ್ದು, ಸಿಂಧನೂರು ಪಟ್ಟಣದಲ್ಲಿ ಮತ್ತೋರ್ವ ಬಾಲಕಿ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ಸಿಂಧನೂರು ಪಟ್ಟಣದ ಮಹೆಬೂಬಿ ಕಾಲೋನಿಯ ಸೋನು (6) ಮೃತ ಬಾಲಕಿ. ಈಕೆ ಅಂಗನವಾಡಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುವ ಅನಿತಾ ಎಂಬುವರ ಮಗಳು.
ಕಳೆದ ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನ ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಜ್ವರ ಉಲ್ಬಣಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ಕಳುಹಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಇಲ್ಲೂ ಕಾಣಿಸಿಕೊಂಡಿತಾ ಜ್ವರ?: ರಾಯಚೂರಿನಲ್ಲಿ ಡೆಂಘೀಗೆ ಬಾಲಕ ಬಲಿ?
ಇತ್ತೀಚೆಗೆ ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಬಾಲಕನೋರ್ವ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದನು. ಈ ಘಟನೆ ಮಾಸುವ ಮುನ್ನವೇ ಬಾಲಕಿ ಬಲಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.