ರಾಯಚೂರು : ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಎರಡು ದಿನಗಳ ಕಾಲ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನ ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಯೋಜನೆಯ ಡಾ. ಎಂ ಎನ್ ನಂದಿನಿ ಹೇಳಿದ್ದಾರೆ.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಂಭಾಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020 ಫೆ.6 ಮತ್ತು 7ರಂದು ಎರಡು ದಿನ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್‌ನಲ್ಲೂ ಸ್ಥಳದಲ್ಲೇ ಆಯುಷ್ಮಾನ್ ಕಾರ್ಡ್‌ಗಳನ್ನ ವಿತರಿಸಲಾಗುವುದು. ಇದಕ್ಕಾಗಿ ಸಾರ್ವಜನಿಕರು ಬಿಪಿಎಲ್(ರೇಷನ್) ಕಾರ್ಡ್ ಹಾಗೂ ಆಧಾರ ಕಾರ್ಡ್ ದಾಖಲೆಗಳನ್ನ ತೆಗೆದುಕೊಂಡು ಬಂದು ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ರು.
ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರ, ಆಯಾ ತಾಲೂಕು ಕೇಂದ್ರಗಳಲ್ಲಿ ಜಿಲ್ಲೆಯ ರಿಮ್ಸ್ ಆಸ್ಪತ್ರೆಯಲ್ಲಿ ಕಾರ್ಡ್‌ನ ವಿತರಿಸಲಾಗಿತ್ತು. ಇದೀಗ ಗ್ರಾಮೀಣ ಭಾಗದ ಜನರಿಗೆ ಕಾರ್ಡ್ ವಿತರಣೆಗಾಗಿ ಈ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಯೋಜನೆಯ ಈ ಯೋಜನೆಯಡಿ 5 ಲಕ್ಷ ರೂಪಾಯಿಯವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್‌ದಾರರಿಗೆ ಶೇ.70ರಷ್ಟು ಕಾರ್ಡ್ ದಾರರೇ ಭರಿಸಿದ್ರೆ, ಇನ್ನುಳಿದ ಶೇ.30ರಷ್ಟು ಸರ್ಕಾರ ವೆಚ್ಚ ಭರಿಸಲಿದೆ ಎಂದು ಮಾಹಿತಿ ನೀಡಿದ್ರು.