ರಾಯಚೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ರಾಯಚೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ.
ನವೆಂಬರ್ 2ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ದಿನಾಂಕ ಹಾಗೂ ಸಮಯ ನಿಗದಿ ಮಾಡಿ ಆದೇಶಿಸಲಾಗಿದೆ. ಒಟ್ಟು 35 ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್ 12, ಬಿಜೆಪಿ 11, ಪಕ್ಷೇತರ 9, ಜೆಡಿಎಸ್ 3 ಸದಸ್ಯ ಬಲವಿದ್ದು, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತವಿಲ್ಲ.
ಹೀಗಾಗಿ ನಗರಸಭೆ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್, ಬಿಜೆಪಿ ಭಾರೀ ಕಸರತ್ತು ನಡೆದಿದ್ದು, ಯಾರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದರೆ ಎನ್ನುವುದು ಸದ್ಯ ಕುತೂಹಲ ಕೆರಳಿಸಿದೆ.