ರಾಯಚೂರು : ಜಿಲ್ಲೆಯಲ್ಲಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ನಡೆದಿದೆ. ಒಟ್ಟು 35 ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಯಾವುದೇ ಸ್ಪಷ್ಟ ಬಹುಮತವಿಲ್ಲ. ಕಾಂಗ್ರೆಸ್-11, ಬಿಜೆಪಿ-12, ಜೆಡಿಎಸ್-3 ಹಾಗೂ ಪಕ್ಷೇತರ 9 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.
ಇದರ ಜತೆಗೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ, ಸಂಸದ ರಾಜಾ ಅಮರೇಶ್ವರ ನಾಯಕ ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ನಿಂದ ಸಜೀದ್ ಸಮೀರ್ ಹಾಗೂ ಬಿಜೆಪಿಯಿಂದ ಲಲಿತಾ ಕಡಗೋಲು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು, ಇಬ್ಬರು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಕೈ ಎತ್ತುವ ಮೂಲಕ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಜರುಗಲಿದೆ. ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ನಲ್ಲೂರು ಮಠದ ಮನೆ - ಬಡಾಮಕಾನ್ ಆಸ್ತಿ ವಿವಾದ: ವಿರೋಧದ ನಡುವೆ ಸರ್ವೇ ಕಾರ್ಯ ಪ್ರಾರಂಭ