ETV Bharat / state

ಅನಗತ್ಯ ಸಂಚಾರ: ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ ರಾಯಚೂರು ಪೊಲೀಸರು - ಬೈಕ್ ಸವಾರರಿಗೆ ದಂಡ ವಿಧಿಸಿದ ರಾಯಚೂರು ಪೊಲೀಸರು

ರಾಯಚೂರಿನಲ್ಲಿ ಅನಾವಶ್ಯಕವಾಗಿ ತಿರುಗಾಡಿದ 484 ಬೈಕ್ ಸವಾರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಬೈಕ್​ ಸವಾರರಿಂದ 78,700 ರೂ. ದಂಡ ವಸೂಲಿ ಮಾಡಿದ್ದಾರೆ.

Raichur police  fined bike riders
ಬೈಕ್ ಸವಾರರಿಗೆ ದಂಡ ವಿಧಿಸಿದ ರಾಯಚೂರು ಪೊಲೀಸರು
author img

By

Published : Jul 6, 2020, 8:31 AM IST

ರಾಯಚೂರು: ಭಾನುವಾರದ ಲಾಕ್‌ಡೌನ್ ವೇಳೆ ಅನಗತ್ಯವಾಗಿ ಸಂಚರಿಸಿದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.‌

ಭಾನುವಾರದ ಲಾಕ್​ಡೌನ್​ ವೇಳೆ ಅಗತ್ಯ ವಸ್ತುಗಳು, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದ್ರೆ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ವಾಹನ ಸವಾರರು ಓಡಾಡಿದ್ದಾರೆ. ಇದರಿಂದ ಪೊಲೀಸರು ಜಿಲ್ಲೆಯ ಒಟ್ಟು 484 ಬೈಕ್ ಸವಾರ ವಿರುದ್ಧ ಪ್ರಕರಣ ದಾಖಲಿಸಿ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಬೈಕ್​ ಸವಾರರಿಂದ 78,700 ರೂ. ದಂಡವನ್ನು ವಸೂಲಿ ಮಾಡಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸಲು ಸರ್ಕಾರ ಭಾನುವಾರ ಒಂದು ದಿನ ಲಾಕ್‌ಡೌನ್ ಜಾರಿಗೊಳಿಸಿತ್ತು. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿತ್ತು. ಇದರ ನಡುವೆ ಅನಾವಶ್ಯಕವಾಗಿ ಓಡಾಡಿದವರಿಗೆ ಪೊಲೀಸರು ದಂಡ ವಿಧಿಸಿ, ಬಿಸಿ ಮುಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.