ರಾಯಚೂರು: ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಹತ್ತಿರದ ರೋಡಲಬಂಡಾ ಕ್ರಾಸ್ ಬಳಿ ಇಂದು ನಡೆದಿದೆ.
ಹಟ್ಟಿಯಿಂದ ಸಿರವಾರ ತಾಲೂಕಿನ ಹೀರಾ ಗ್ರಾಮದತ್ತ 15ಕ್ಕೂ ಅಧಿಕ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಟಾಟಾ ಏಸ್ ಹೋಗುತ್ತಿತ್ತು. ಈ ವೇಳೆ ಹಟ್ಟಿ ಮಾರ್ಗದಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡಿದಿದೆ. ಪರಿಣಾಮ ಟಾಟಾ ಏಸ್ ರಸ್ತೆಯ ಪಕ್ಕದಲ್ಲಿರುವ ಹೊಲಕ್ಕೆ ಪಲ್ಟಿಯಾಗಿ ಬಿದ್ದಿದ್ದು, ಅನೇಕರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನವಾಗಿದೆ.
ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.