ರಾಯಚೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಜಿಲ್ಲೆಯ ಚುನಾವಣಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊರೊನಾ ಸೋಂಕಿನ ಭೀತಿ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಚುನಾವಣೆ ನಡೆಯುವ ಕೇಂದ್ರದ ಸುತ್ತ 500 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರು ಭಾರಿ ಪೈಪೂಟಿ ನಡೆಸುತ್ತಿದ್ದಾರೆ. ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರು, ಕಾರ್ಯಕರ್ತರು ಕೇಂದ್ರದ ಸುತ್ತಮುತ್ತ ಸೇರುವ ಸಾಧ್ಯತೆಯಿದೆ. ಇತ್ತ ಕೊರೊನಾ ಭೀತಿ ಹಿನ್ನೆಲೆ ಜನ ಗುಂಪು ಗುಂಪಾಗಿ ಸೇರುವಂತಿಲ್ಲ ಎಂಬ ಉದ್ದೇಶದಿಂದ ಮುಜಾಂಗ್ರತಾ ಕ್ರಮವಾಗಿ ಚುನಾವಣಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕವೂ ಪಟಾಕಿ ಸಿಡಿಸುವುದು, ಮೆರವಣಿಗೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.