ETV Bharat / state

ಸಂಬಳ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಂಜಿನಿಯರಿಂಗ್ ಅತಿಥಿ ಉಪನ್ಯಾಸಕರಿಂದ ಧರಣಿ - ಬಿಜೆಪಿ ಸರ್ಕಾರ

ರಾಯಚೂರು ಯರಮರಸ್ ಕ್ಯಾಂಪ್​ನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಎದುರು ತರಗತಿಗಳನ್ನು ಬಹಿಷ್ಕರಿಸುವ ಮೂಲಕ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು.

guest lecturers staged a sit-in.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಎದುರು ಅತಿಥಿ ಉಪನ್ಯಾಸಕರು ಧರಣಿ ಕೈಗೊಂಡರು.
author img

By ETV Bharat Karnataka Team

Published : Nov 29, 2023, 10:56 PM IST

Updated : Nov 29, 2023, 11:01 PM IST

ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ

ರಾಯಚೂರು: ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಇಂದು ಎಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ನಗರದ ಹೊರವಲಯದ ಯರಮರಸ್ ಕ್ಯಾಂಪ್​ನ ಸರ್ಕಾರಿ ಎಂಜಿನಿಯರಿಂಗ್ ಮಹಾವಿದ್ಯಾಲಯದ ಎದುರು ತರಗತಿಗಳನ್ನು ಬಹಿಷ್ಕರಿಸುವ ಮೂಲಕ ಕಾಲೇಜಿನ ಎಲ್ಲ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.

ಸೇವೆಗೆ ತಕ್ಕಂತೆ ಸಂಬಳ ಸಿಗುತ್ತಿಲ್ಲ: ಅರೆಕಾಲಿಕ ಅತಿಥಿ ಉಪನ್ಯಾಸಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ನಮಗೆ ಸೇವೆಗೆ ತಕ್ಕಂತೆ ವೇತನ ಸಿಗುತ್ತಿಲ್ಲ ಬದಲಾಗಿ 15 ಸಾವಿರ ರೂಪಾಯಿಯನ್ನು ನೀಡಲಾಗುತ್ತಿದೆ. ಅಲ್ಲದೇ ಈ ಸೇವೆಯ ವರ್ಷ ಪೂರ್ತಿ ತೆಗೆದುಕೊಳ್ಳದೇ 8 ತಿಂಗಳ ಅವಧಿ ವರೆಗೆ ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಆದರೆ, ಈಗ ಶಾಲಾ - ಕಾಲೇಜು ಅತಿಥಿ ಉಪನ್ಯಾಸಕ ವೇತನ ಪರಿಷ್ಕರಿಸಲಾಗಿದೆ. ನಮಗೆ ಕೇವಲ 15 ಸಾವಿರ ರೂಪಾಯಿ ಸರ್ಕಾರ ವೇತನ ನೀಡುತ್ತಿದೆ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದರು.

ರಾಜ್ಯಾದ್ಯಂತ ಒಟ್ಟು 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸುಮಾರು 280 ಜನ ಅರೆಕಾಲಿಕ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ರಾಯಚೂರು ಯರಮರಸ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 23 ಜನ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಸೇವೆಗೆ ಇದುವರೆಗೂ ಸಹ ಕನಿಷ್ಠ ಸಂಬಳ ಸಿಗುತ್ತಿಲ್ಲ‌ ಎಂದು ಅತಿಥಿ ಉಪನ್ಯಾಸಕರು ಆಪಾದಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ, ಈಗಿನ ಕಾಂಗ್ರೆಸ್​ ಸರ್ಕಾರಕ್ಕೂ ವೇತನವನ್ನು ಹೆಚ್ಚಿಸಬೇಕೆಂದು ಮನವಿ ಮಾಡಲಾಗಿದೆ. ಆದರೆ, ಸಂಬಳ ಜಾಸ್ತಿ ಮಾಡಿಲ್ಲ. ಪ್ರಾಥಮಿಕ, ಪ್ರೌಢಶಾಲಾ, ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆಯೇ ಹೊರತು, ನಮ್ಮ ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವೆ ನಿರ್ವಹಿಸುತ್ತಿರುವವರಿಗೆ ಕಡಿಮೆ ವೇತನ ನೀಡಿ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಕಿಡಿಕಾರಿದರು.

ಎಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕಾಯಂಗೊಳಿಸಬೇಕು. ಅತಿಥಿ ಉಪನ್ಯಾಸಕರಿಗೆ ಕನಿಷ್ಠ ೪೫ ಸಾವಿರ ರೂಪಾಯಿ ಸಂಬಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಕಾಲೇಜು ಎದುರು ಅತಿಥಿ ಉಪನ್ಯಾಸಕರು ಸರ್ಕಾರವನ್ನು ಒತ್ತಾಯಿಸಿದರು. ಬೇಡಿಕೆ ಈಡೇರುವವರೆಗೂ ಹೋರಾಟ ಕೈಬಿಡಲ್ಲ, ರಾಜ್ಯಾದ್ಯಂತ ಎಲ್ಲ ಎಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರು ಹೋರಾಟ ಆರಂಭಿಸಲಿದ್ದಾರೆ ಎಂದು ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕರು ತಿಳಿಸಿದರು.

ಇದನ್ನೂಓದಿ:ಟೆಕ್​ ಸಮ್ಮಿಟ್​ನಲ್ಲಿ ಗಮನಸೆಳೆಯುತ್ತಿರುವ ತಾರೆ ಜಮೀನ್ ಪರ್​ನ ಸಂಚಾರಿ ತಾರಾಲಯ

Last Updated : Nov 29, 2023, 11:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.