ರಾಯಚೂರು : ಜಿಲ್ಲೆಯ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಶಿಕ್ಷಕಿಯರು ಮತ್ತು ಮಕ್ಕಳು ಶಾಲೆಗೆ ಹಿಜಾಬ್ ಧರಿಸಿ ಬಂದಿದ್ದರು.
ಹೈಕೋರ್ಟ್ ಆದೇಶದ ಪ್ರಕಾರ ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಆದ್ರೆ, ಕೋರ್ಟ್ ಆದೇಶವನ್ನ ಉಲ್ಲಂಘಿಸಿ ವಿದ್ಯಾರ್ಥಿನಿಯರು ಹಾಗೂ ಟೀಚರ್ಸ್ ಬುರ್ಕಾ ಧರಿಸಿಕೊಂಡು ಬಂದಿದ್ದರು. ಅಲ್ಲದೇ ಈ ಬಗ್ಗೆ ಸ್ಥಳೀಯ ಜಿಲ್ಲಾಡಳಿತ ಸೂಚನೆ ನೀಡಿದ್ರೂ, ಅದನ್ನು ಲೆಕ್ಕಿಸದೇ ಹಿಜಾಬ್ ಧರಿಸಿಕೊಂಡು ಬಂದಿದ್ದರು.
ಘಟನೆ ಬೆನ್ನಲ್ಲೆ ತಕ್ಷಣ ಶಾಲೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಶೇಖ್ ಅಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಪಾಲಿಸುವಂತೆ ಶಾಲೆಯ ಮುಖ್ಯಶಿಕ್ಷಕರಿಗೆ ಸೂಚನೆ ನೀಡಲಾಗಿತ್ತು.
ಮಕ್ಕಳು ಗೊತ್ತಿಲ್ಲದೆ ಹಿಜಾಬ್ ಹಾಕಿಕೊಂಡು ಬಂದಿದ್ದಾರೆ. ಈಗ ಅಧಿಕಾರಿಗಳ ಸೂಚನೆ ಬಳಿಕ ಮಕ್ಕಳು ಹಿಜಾಬ್ ತೆಗೆದಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ಮುಖ್ಯ ಶಿಕ್ಷಕರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಹಿಜಾಬ್ ಪ್ರಕರಣ: ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್