ETV Bharat / state

ನಾಗಲಾಪುರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವು - ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ಈಜಲು ತೆರಳಿದ್ದ ಇಬ್ಬರು ಬಾಲಕರಿಗೆ ಕೆಸರಿನಲ್ಲಿ ಕಾಲು ಸಿಲುಕಿ ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.

ಬಾಲಕರು ನೀರುಪಾಲು
ಬಾಲಕರು ನೀರುಪಾಲು
author img

By

Published : Apr 27, 2020, 7:22 PM IST

ರಾಯಚೂರು: ಹಳ್ಳಕ್ಕೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ‌ಸಂಭವಿಸಿದೆ.

ನರಸಿಂಹ (17), ವೆಂಕಟೇಶ್ (15) ಮೃತ ಬಾಲಕರು ಎಂದು ಗುರುತಿಸಲಾಗಿದೆ. ನಾಗಲಾಪುರ-ಪೂರತಿಪ್ಲಿ ಗ್ರಾಮದ ಮಧ್ಯ ಭಾಗದಲ್ಲಿ ಹಳ್ಳವಿದ್ದು, ಈಜಲು ಬಾಲಕರಿಬ್ಬರು ತೆರಳಿದ್ದರು. ಈ ವೇಳೆ ಕೆಸರಿನಲ್ಲಿ ಕಾಲು ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಕುರಿತು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಲಕರ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.