ETV Bharat / state

ಸರಣಿ ಅಪಘಾತ.. ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ದುರ್ಮರಣ - ಭಯಾನಕ ದೃಶ್ಯ - ರಾಯಚೂರಿನಲ್ಲಿ ರಸ್ತೆ ಅಪಘಾತ ಬೈಕ್ ಸವಾರ ಸಾವು

ಸಾರಿಗೆ ಬಸ್ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ದಾರುಣ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

Youth dies due to road accident at Raichur
ಉದಯ ಕುಮಾರ್-ಮೃತ ಬೈಕ್ ಸವಾರ
author img

By

Published : Mar 29, 2022, 7:18 PM IST

ರಾಯಚೂರು: ಜಿಲ್ಲೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಇಲಾಖೆಯ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ಪಟ್ಟಣದ ಹೊರವಲಯದ ಹೊಸಳ್ಳಿ ಕ್ಯಾಂಪ್ ಬಳಿಯ ಖಾಸಗಿ ಪೆಟ್ರೋಲ್ ಬಂಕ್ ಮುಂಭಾಗ ನಡೆದಿದೆ. ಪಟ್ಟಣದ ಗಂಗಾ ನಗರ ನಿವಾಸಿ ಉದಯ ಕುಮಾರ್(21) ಮೃತ ಬೈಕ್ ಸವಾರ.

ಮೊದಲಿಗೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ, ಇಬ್ಬರು ಬೈಕ್ ಸವಾರರು ರಸ್ತೆಯ ಮೇಲೆ ಬಿದ್ದಿದ್ದಾರೆ. ಇದೇ ವೇಳೆ ಮುಂದಿನಿಂದ ಬರುತ್ತಿದ್ದ ಸಾರಿಗೆ ಬಸ್ ರಸ್ತೆಯ ಮೇಲೆ ಬಿದ್ದಿದ್ದ ಯುವಕನ ಮೇಲೆ ಹರಿದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆಯ ದೃಶ್ಯಾವಳಿ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು: ಸಿಸಿಟಿವಿ ದೃಶ್ಯ

ಮೃತ ಉದಯ ಕುಮಾರ್ ಸಿಂಧನೂರಿನಿಂದ ತನ್ನ ಸಂಬಂಧಿಕರ ಮನೆ ಗಂಗಾವತಿಗೆ ತೆರಳುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುಂಡಾನೆ ಹಿಡಿಯುವಾಗ ಮಿಸ್ ಫೈರ್ : ಪ್ರಾಣಾಪಾಯದಿಂದ ಪಾರಾದ ಅರಣ್ಯ ಇಲಾಖೆ ಸಿಬ್ಬಂದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.