ETV Bharat / state

ರಾಯಚೂರು ಜಿಪಂ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ರದ್ದು

author img

By

Published : Aug 19, 2020, 2:13 PM IST

ನಿಗದಿತ ಸಮಯಕ್ಕೆ ಸದಸ್ಯರು ನಾಮಪತ್ರ ಸಲ್ಲಿಸಲು ಬಾರದ ಕಾರಣ ಚುನಾವಣೆ ರದ್ದುಪಡಿಸಿದ್ದು, ಮುಂದಿನ ದಿನಾಂಕವನ್ನು ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ಮತ್ತೊಮ್ಮೆ ನಿಗದಿಪಡಿಸಲಾಗುತ್ತದೆ ಎಂದು ಜಿಒಂ ಸಿಇಒ ತಿಳಿಸಿದರು.

ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ರದ್ದು

ರಾಯಚೂರು: ಜಿಲ್ಲಾ ಪಂಚಾಯತ್​​ ಮೂರನೇ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಮಾಡಲು ಕರೆಯಲಾಗಿದ್ದ ಚುನಾವಣೆಗೆ ಸದಸ್ಯರು ಬಾರದ ಕಾರಣ ಚುನಾವಣೆಯನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್​​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಮಾಡಲು ಬೆಳಿಗ್ಗೆ 9ರಿಂದ 10.30ರವರೆಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿತ್ತು. ಆದರೆ ನಿಗದಿತ ಸಮಯಕ್ಕೆ ಸದಸ್ಯರು ನಾಮಪತ್ರ ಸಲ್ಲಿಸಲು ಬಾರದ ಕಾರಣ ಚುನಾವಣೆ ರದ್ದುಪಡಿಸಿದ್ದು, ಮುಂದಿನ ದಿನಾಂಕವನ್ನು ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ಮತ್ತೊಮ್ಮೆ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಮೂರನೇ ಅವಧಿಗೆ ಸಾಮಾನ್ಯ ಸ್ಥಾಯಿ ಸಮಿತಿ, ಹಣಕಾಸು ಲೆಕ್ಕ ಪರಿಶೋಧನಾ ಮತ್ತು ಯೋಜನಾ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.