ರಾಯಚೂರು: ಕೊರೊನಾ ಹಿನ್ನೆಲೆ ಕಲಾವಿದರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಪರಿಹಾರ ಘೋಷಿಸಬೇಕು ಇಲ್ಲವೆ ಪ್ರಾಯೋಜಿತ ಕಾರ್ಯಕ್ರಮ ನೀಡಬೇಕು ಎಂದು ರಾಯಚೂರು ಜಿಲ್ಲಾ ಕಲಾವಿದರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು. ರಾಜ್ಯದಲ್ಲಿ ಸಾವಿರಾರು ವೃತ್ತಿ ಕಲಾವಿದರು ಕಲೆಯನ್ನೆ ನಂಬಿ ಜೀವನ ನಡೆಸುತ್ತಿದ್ದಾರೆ. ಲಾಕ್ಡೌನ್ ಅನ್ಲಾಕ್ ಆದ ನಂತರ ಎಲ್ಲಾ ಕ್ಷೇತ್ರದ ಕಾರ್ಮಿಕರಿಗೆ ಕೆಲಸ ದೊರೆತ್ತಿದೆ. ಅದರೆ ವೃತ್ತಿ ಕಲಾವಿದರಿಗೆ ಮಾತ್ರ ಅವಕಾಶ ದೊರೆಯುತ್ತಿಲ್ಲ.
ಅಲ್ಲದೆ ರಾಜ್ಯ ಸರ್ಕಾರ ಘೋಷಿಸಿದ ಪರಿಹಾರ ಎಲ್ಲರಿಗೂ ತಲುಪಿಲ್ಲ. ಕೂಡಲೇ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪ್ರಾಯೋಜಿತ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಬೇಕು. ಕಲಾವಿದರಿಗೆ ಪ್ರತಿ ತಿಂಗಳು 10 ಸಾವಿರ ಪ್ರೋತ್ಸಾಹ ಧನ ನೀಡಿಕೆ ಸೇರಿದಂತೆ ಇತರೆ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.